Skip to content

   S M ಕೃಷ್ಣ ವಿದಿವಶ ಇನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜ್ ರಜೆ ಘೋಷಿಸಿದ ಸರ್ಕಾರ                          

Spread the love

             S M ಕೃಷ್ಣ ವಿದಿವಶ ಇನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜ್ ರಜೆ ಘೋಷಿಸಿದ ಸರ್ಕಾರ

 

 

                     ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ 92ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣ ತಮ್ಮ ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.                            ಆದ ಕಾರಣ ನಾಳೆ ಅಂದರೆ (11 ಡಿಸೆಂಬರ್ ) ರಂದು ಶಾಲಾ ಕಾಲೇಜ್ ರಜೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. 
          ಎಸ್ಎಂ ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸರ್ಕಾರ ಈ ನಿರ್ದಾರ ತೆಗೆದು ಕೊಂಡಿದೆ.  ಇದೇ ವೇಳೆ ನಾಳೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದ್ದಾರೆ.  ಎಸ್ಎಂ ಕೃಷ್ಣ ವಿಧಿವಶರಾದ ಬೆನ್ನಲ್ಲೇ ಹುಟ್ಟೂರಾಗಿರುವ ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಜಿಲ್ಲಾಡಳಿತ ರಜೆ ಘೋಷಣೆ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದೆ. 
 
            ಡಿಸೆಂಬರ್ 11ರ ಮಧ್ಯಾಹ್ನ 3 ಗಂಟೆ ನಂತರ ಎಲ್ಲಾ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.  ಕರ್ನಾಟಕ ರಾಜ್ಯಕ್ಕೆ ದೊಡ್ಡ ಶಕ್ತಿಯಾಗಿದ್ದ  ದಿವಂಗತ ಎಸ್ಎಂ ಕೃಷ್ಣ ದಕ್ಷ ಆಡಳಿತ ನೀಡಿದ್ದಾರೆ.  ಅಧಿವೇಶನ ಸಂಬಂಧ ಬೆಳಗಾವಿಯಲ್ಲಿದ್ದ ಡಿಕೆ ಶಿವಕುಮಾರ್ ಬೆಂಗಳೂರಿಗೆ ಆಗಮಿಸಿ ಎಂಎಸ್ ಕೃಷ್ಣ ಅಂತಿಮ ದರ್ಶನ ಪಡೆದಿದ್ದಾರೆ.  

                         ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಧೀಮಂತ ನಾಯಕ ಎಸ್ಎಂ ಕೃಷ್ಣ, ಇವತ್ತು ನಾವು ನೋಡುತ್ತಿರುವ ಹಾಗೂ ಅನುಭವಿಸುತ್ತಿರುವ ಬೆಂಗಳೂರು ಎಸ್ಎಂ ಕೃಷ್ಣ ಅವರ ಕೊಡುಗೆಯಾಗಿದೆ ಮತ್ತು ಮಹತ್ತರ ಕನಸಾಗಿದೆ .ಭಾರತ ಕಂಡ ಅತಿ ಸರಲ ರಾಜಕಾರಣಿ ಎಂದೇ ಪ್ರಖ್ಯಾತಿ ಪಡೆದ ನಾಯಕ ಎಂದೇ ಪಸಿದ್ದಿ .

                  ;   ಕರ್ನಾಟಕಕ್ಕೆ ನೀಡಿದ ಕೊಡುಗೆಗಳು

           ;       1999 ರಿಂದ 2004ರ ವರೆಗೆ ಎಸ್ಎಂ ಕೃಷ್ಣ ಕರ್ನಾಟಕ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು.
          ;        ಈ ವೇಳೆ ಬೆಂಗಳೂರನ್ನು ಐಟಿ ಸಿಟಿಯನ್ನಾಗಿ ಮಾರ್ಪಡಿಸಿದ್ದರು.
          ;      ಟೆಕ್ ಕ್ಷೇತ್ರದಲ್ಲಿ ಬೆಂಗಳೂರನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಎಸ್ಎಂ ಕೃಷ್ಣಗೆ ಸಲ್ಲಲಿದೆ.
          ;        ಯುಪಿಎ ಸರ್ಕಾರದಲ್ಲಿ ಎಸ್ಎಂ ಕೃಷ್ಣ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
          ;        2004ರಿಂದ 2008ರ ವರಗೆ ಮಹಾರಾಷ್ಟ್ರ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.
           ;     ಕಾಂಗ್ರೆಸ್ ಕಾರ್ಯಕರ್ತನಾಗಿ, ನಾಯಕನಾಗಿ, ಸಚಿವರಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲಾರಾಗಿ ಸೇವೆ ಸಲ್ಲಿಸಿದ್ದಾರೆ.
         ;       ರಾಜಕೀಯ ಜೀವನದ ಬಹುತೇಕ ಸಮಯ ಕಾಂಗ್ರೆಸ್ ಸಮಯದಲ್ಲಿ ಕಳೆದಿದ್ದ ಎಸ್ಎಂ ಕೃಷ್ಣ 2017ರಲ್ಲಿ ಬಿಜೆಪಿ ಸೇರಿಕೊಂಡು ಅಚ್ಚರಿ ಮೂಡಿಸಿದ್ದರು.

Leave a Reply

Your email address will not be published. Required fields are marked *